Select Your Language

Notifications

webdunia
webdunia
webdunia
webdunia

2022ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ: ಪ್ರಧಾನಿ ಮೋದಿ

2022ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ: ಪ್ರಧಾನಿ ಮೋದಿ
ಬರೇಲಿ , ಭಾನುವಾರ, 28 ಫೆಬ್ರವರಿ 2016 (18:56 IST)
ಮುಂಬರುವ 2022ರ ವೇಳೆಗೆ ದೇಶದ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
 
ಉತ್ತರಪ್ರದೇಶದ ರಾಯಬರೇಲಿಯಲ್ಲಿ ಆಯೋಜಿಸಲಾಗಿದ್ದ ರೈತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ನಿಗದಿಪಡಿಸಿದ್ದ ಗ್ರಾಮೀಣ ಉದ್ಯೋಗ ಖಾತರಿ ಅನುದಾನವನ್ನೂ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.
 
ಮುಂಬರುವ 2022ರ ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ, ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೇಂದ್ರ ಸರಕಾರ ಬಯಸಿದೆ. ಸರಕಾರ ಕಾರ್ಪೋರೇಟ್ ಪರವಾಗಿದೆ ಎನ್ನುವ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದರು. 
 
ನಾನು ಕೃಷಿ ಪರವಾದಂತಹ ವ್ಯಕ್ತಿ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ಕೃಷಿಯನ್ನು ವೈಜ್ಞಾನಿಕವಾಗಿ ಮತ್ತು ಆರ್ಥಿಕವಾಗಿ ಲಾಭದಾಯಕವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
 
ದೇಶದ ರೈತರ ಮುಂದೆ ಹಲವಾರು ಸಮಸ್ಯೆಗಳಿವೆ. ಆದರೆ, ಸಮಸ್ಯೆಗಳನ್ನೇ ಅವಕಾಶಗಳನ್ನಾಗಿ ಪರಿವರ್ತಿಸಬಹುದು. ರೈತರು ದೇಶದ ಹೆಮ್ಮೆಯ ಸಂಕೇತ ಎಂದು ಪ್ರಧಾನಿ ಮೋದಿ ಶ್ಲಾಘಿಸಿದರು.

Share this Story:

Follow Webdunia kannada