ಪ್ರಧಾನಿ ಮೋದಿ ಇನ್ಮುಂದೆಯಾದ್ರೂ ಚುನಾಯಿತ ಸರಕಾರಗಳಲ್ಲಿ ಹಸ್ತಕ್ಷೇಪ ನಿಲ್ಲಿಸಲಿ: ಕೇಜ್ರಿವಾಲ್

Webdunia
ಗುರುವಾರ, 21 ಏಪ್ರಿಲ್ 2016 (21:32 IST)
ಉತ್ತರಾಖಂಡ್‌‌ನಲ್ಲಿ ಕೇಂದ್ರ ಸರಕಾರ ಹೇರಿದ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹೈಕೋರ್ಟ್ ತೀರ್ಪು ಪ್ರಧಾನಿ ಮೋದಿಗೆ ತೀವ್ರ ಮುಖಭಂಗವಾಗಿದ್ದು, ಇನ್ಮುಂದೆಯಾದರೂ ಚುನಾಯಿತ ಸರಕಾರಗಳಲ್ಲಿ ಮಧ್ಯ ಪ್ರವೇಶಿಸುವುದನ್ನು ನಿಲ್ಲಿಸಿ ಪ್ರಜಾಪ್ರಭುತ್ವವನ್ನು ಗೌರವಿಸಲಿ ಎಂದು ಹೇಳಿದ್ದಾರೆ.
  
ಉತ್ತರಾಖಂಡ್ ಹೈಕೋರ್ಟ್ ತೀರ್ಪು ಮೋದಿ ಸರಕಾರಕ್ಕೆ ಮುಖಭಂಗವಾಗಿದೆ. ಚುನಾಯಿತ ಸರಕಾರಗಳಲ್ಲಿ ಮಧ್ಯಪ್ರವೇಶಿಸುವುದು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದ ಕೇಂದ್ರ ಸರಕಾರದ ಕ್ರಮವನ್ನು ರದ್ದುಗೊಳಿಸಿ ಏಪ್ರಿಲ್ 29 ರಂದು ಬಹುಮತ ಸಾಬೀತುಪಡಿಸುವಂತೆ ರಾವತ್‌ಗೆ ಹೈಕೋರ್ಟ್ ಆದೇಶಿಸಿದೆ.
 
ಕೇಂದ್ರ ಸರಕಾರ ಅನಗತ್ಯವಾಗಿ ಉತ್ತರಾಖಂಡ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಪ್ರಜಾಪ್ರಭುತ್ವದ ಕಾನೂನುಗಳನ್ನು ಗಾಳಿಗೆ ತೂರಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೂಡಾ ತಪ್ಪೆಸಗಿದ್ದಾರೆ. ಆದ್ದರಿಂದ, ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಲಾಗುತ್ತದೆ ಎಂದು ಉತ್ತರಾಖಂಡ್ ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Show comments