Publish Date: Sun, 05 Nov 2023 (16:20 IST)
Updated Date: Sun, 05 Nov 2023 (15:33 IST)
ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಜೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ, ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಿದ್ದಾರೆ. ಇನ್ನು ಅಧಿಕಾರಾವಧಿಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಸುನಕ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.