Publish Date: Fri, 01 Nov 2019 (10:29 IST)
Updated Date: Fri, 01 Nov 2019 (10:34 IST)
ನವದೆಹಲಿ : ಇಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಯವರು ಕನ್ನಡದಲ್ಲಿ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ರಾಷ್ಟ್ರದ ಬೆಳವಣೆಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.