Publish Date: Wed, 05 Sep 2018 (06:56 IST)
Updated Date: Wed, 05 Sep 2018 (07:00 IST)
ತಿರುವನಂತಪುರಂ : ಇತ್ತೀಚೆಗೆ ಸಿನಿಮಾ ನಾಯಕರು ಕೂಡ ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದು, ಇದೀಗ ಮಲಯಾಳಂ ನಟ ಮೋಹನ್ ಲಾಲ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿ ಕಡೆಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬುದಾಗಿ ತಿಳಿದುಬಂದಿದೆ.
ಮೋಹನ್ ಲಾಲ್ ಬಿಜೆಪಿ ಸೇರ್ಪಡೆಗೆ ಆರ್‍ಎಸ್‍ಎಸ್‍ನಿಂದ ಭಾರೀ ಕಸರತ್ತು ನಡೆಯುತ್ತಿದ್ದು, ಮೋಹನ್‍ಲಾಲ್ ಮೂಲಕ ಕೇರಳದಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೋಹನ್ ಲಾಲ್ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಆದರೆ ಇತ್ತೀಚೆಗೆ ಮೋಹನ್ ಲಾಲ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. “ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ” ಎಂದು ಮೋಹನ್ ಲಾಲ್ ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.