Webdunia - Bharat's app for daily news and videos

Install App

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ಪುತ್ರಿಯೊಂದಿಗೆ ಹಾಸಿಗೆ ಹಂಚಿಕೊಂಡ ಪಾಪಿ ತಂದೆ

Webdunia
ಶುಕ್ರವಾರ, 24 ಏಪ್ರಿಲ್ 2015 (15:22 IST)
ಲೈಂಗಿಕ ಸುಖ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿನ್ನನ್ನು ಅನಾಥಳಾಗಿಸುತ್ತೇನೆ ಎಂದು ಬೆದರಿಸಿದ ತಂದೆ, ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ ಎಂದು ದಿಂಡೋಷಿ ಪೊಲೀಸ್ ಮೂಲಗಳು ತಿಳಿಸಿವೆ.

ಮೊದಲ ಪತ್ನಿಯಾಗಿದ್ದವಳನ್ನು ದೂರ ಮಾಡಿದ ಆರೋಪಿ, ಪುತ್ರಿಯನ್ನು ತನ್ನೊಂದಿಗೆ ಇರಿಸಿಕೊಂಡಿದ್ದ. ನಂತರ ಎರಡನೇ ಮದುವೆ ಮಾಡಿಕೊಂಡು ಆ ಮಹಿಳೆಯಿಂದ ಎರಡು ಮಕ್ಕಳನ್ನು ಹೊಂದಿದ್ದಾನೆ.

ಕೆಲ ವಾರಗಳ ಹಿಂದೆ, ಎರಡನೇ ಪತ್ನಿ ಸಂಬಂಧಿಕರ ಮನೆಗೆ ತೆರಳಿದ್ದಾಗ ಆರೋಪಿ ಕುಡಿದು ಮತ್ತಿನಲ್ಲಿ ಮನೆಗೆ ಬಂದು ಪುತ್ರಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾನೆ. ಆದರೆ, ಬಾಲಕಿ ಆತನನ್ನು ತಡೆದು ತನ್ನ ತಾಯಿಗೆ ಮಾಹಿತಿ ನೀಡುವುದಾಗಿ ಬೆದರಿಸಿದ್ದಾಳೆ.

ಒಂದು ವೇಳೆ ನೀನು ಹಾಗೇ ಮಾಡಿದಲ್ಲಿ ನಾನು ಆತ್ಮಹತ್ಯೆ ಮಾಡಿಕೊಂಡು ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಅನಾಥರನ್ನಾಗಿಸುತ್ತೇನೆ  ಎಂದು ಆರೋಪಿ ಬೆದರಿಸಿದ್ದಾನೆ.

ತಂದೆಯ ವರ್ತನೆಯಿಂದ ಗಾಬರಿಗೊಂಡ ಬಾಲಕಿ ಮೌನವಾಗಿದ್ದಾಳೆ. ಮೌನಂ ಸಮ್ಮತಿ ಲಕ್ಷಣಂ ಎಂದು ತಿಳಿದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಪ್ರತಿನಿತ್ಯ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ದೇಹಸ್ಥಿತಿಯಲ್ಲಿ ಬದಲಾವಣೆಯಾಗುತ್ತಿರುವುದನ್ನು ಕಂಡು ಬಾಲಕಿಯ ತಾಯಿ ಪ್ರಶ್ನಿಸಿದಾಗ ಸತ್ಯ ಸಂಗತಿ ಬಹಿರಂಗವಾಗಿದೆ.

ಬಾಲಕಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಪತಿಯ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾಳೆ. ತದನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ