ಯುರೋಪ್‌ನ ಜನಸಂಖ್ಯೆಗಿಂತ ಹೆಚ್ಚಿನ ಜನರು ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ: ಮೋದಿ

Sampriya
ಸೋಮವಾರ, 24 ಫೆಬ್ರವರಿ 2025 (18:54 IST)
Photo Courtesy X
ಬಿಹಾರ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಯಾದವ್ ಅವರ "ಫಾಲ್ತು ಹೈ ಕುಂಭ್" ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿದರು.

"ಜಂಗಲ್ ರಾಜ್ ಅನ್ನು ನಂಬುವವರು ನಮ್ಮ ಪರಂಪರೆಯನ್ನು ದ್ವೇಷಿಸುತ್ತಾರೆ. ಮಹಾಕುಂಭದ ಬಗ್ಗೆ ನೆಗೆಟಿವ್ ಆಗಿ ಮಾತನಾಡುವವರನ್ನು ಬಿಹಾರ ಜನತೆ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಬಿಹಾರದ ಭಾಗಲ್ಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಏಕತೆಯನ್ನು ಎತ್ತಿತೋರಿಸಿದೆ. ಈ ಆಚರಣೆಯು ಭಾರತದ ನಂಬಿಕೆ, ಏಕತೆ ಮತ್ತು ಸಾಮರಸ್ಯದ ಅತಿ ದೊಡ್ಡ ಸಭೆಯನ್ನು ಪ್ರತಿನಿಧಿಸುತ್ತದೆ ಎಂದರು.

"ಯುರೋಪಿನ ಇಡೀ ಜನಸಂಖ್ಯೆಗಿಂತ ಹೆಚ್ಚಿನ ಜನರು ಈ ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಆದರೆ, 'ಜಂಗಲ್ ರಾಜ್'ನಿಂದ ಬಂದವರು ಈ ಪವಿತ್ರ ಘಟನೆಯನ್ನು ಟೀಕಿಸುತ್ತಿದ್ದಾರೆ. ರಾಮ ಮಂದಿರದ ವಿರುದ್ಧ ಇರುವವರು ಮಹಾಕುಂಭವನ್ನು ನಿಂದಿಸುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಪವಿತ್ರ ಸಂದರ್ಭದ ಬಗ್ಗೆ ಕೆಟ್ಟದಾಗಿ ಮಾತನಾಡುವವರನ್ನು ಬಿಹಾರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನನಗೆ ವಿಶ್ವಾಸವಿದೆ" ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಸ್ತುತ ಪ್ರಯಾಗರಾಜ್‌ನಲ್ಲಿ 'ಏಕತೆಯ ಮಹಾಕುಂಭ' ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇದು ಭಾರತದ ನಂಬಿಕೆ, ಏಕತೆ ಮತ್ತು ಸಾಮರಸ್ಯದ ಅತಿದೊಡ್ಡ ಆಚರಣೆಯನ್ನು ಪ್ರತಿನಿಧಿಸುತ್ತದೆ.
ಭಾರತದ ಭವ್ಯ ಪರಂಪರೆಯನ್ನು ಸಂರಕ್ಷಿಸಲು ಮತ್ತು ಭವ್ಯ ಭವಿಷ್ಯವನ್ನು ನಿರ್ಮಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಒತ್ತಿ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments