ಈ ಪ್ರಪಂಚದಲ್ಲಿ ಹಿಂಗೂ ಇರ್ತಾರ ? : ಹಣಕ್ಕಾಗಿ ಹೆಣ್ಣು ಶಿಶುವನ್ನು ಮಾರಿದ ತಾಯಿ!

Webdunia
ಶುಕ್ರವಾರ, 4 ಆಗಸ್ಟ್ 2023 (13:18 IST)
ಕೋಲ್ಕತ್ತಾ : ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಜನ ಏನು ಮಾಡಲು ತಯಾರು ಇರುತ್ತಾರೆ. ಅಂತೆಯೇ ಇಲ್ಲೊಬ್ಬ ನಿರ್ದಯಿ ತಾಯಿ ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
 
ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದಾಳೆ. ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ.

ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರು ರೂಪಾಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ ಸ್ಪಷ್ಟ ಕಾರಣ ಕೊಡುವಲ್ಲಿ ಎಡವಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಮೇಲೆ ಅನುಮಾನಗೊಂಡ ಪೊಲೀಸರು ರೂಪಾಲಿಯನ್ನು ಬಂಧಿಸಿದ್ದಾರೆ. ಬಳಿಕ ತನಿಕೆಗೆ ಒಳಪಡಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಈಕೆಯ ಜೊತೆ ರೂಪ ದಾಸ್ ಹಾಗೂ ಸ್ವಪ್ನಾ ಸರ್ದಾರ್ ಎಂಬ ಇನ್ನಿಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ರೂಪಾಲಿ ಅವರ ಪಕ್ಕದ ಮನೆಯವರಾದ ಪ್ರತಿಮಾ ಭುವಿನ್ಯಾ ಅವರ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಆರೋಪಿಗಳ ಮೇಲೆ 317 (ಮಗುವನ್ನು ತ್ಯಜಿಸುವುದು), 370 (ಖರೀದಿ- ಮಾರಾಟ), 372 (ಅಪ್ರಾಪ್ತರ ಮಾರಾಟ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments