ತಾಯಿಯೊಂದಿಗೆ ಸೇರಿ ಅಕ್ಕನನ್ನು ಕೊಂದ ತಮ್ಮ!

Webdunia
ಮಂಗಳವಾರ, 7 ಡಿಸೆಂಬರ್ 2021 (17:58 IST)
ಮುಂಬೈ : 19 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿ ಇಬ್ಬರೂ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದಿದೆ.

ಯುವತಿಯ ತಲೆ ಕತ್ತರಿಸಿ, ಅದರ ಮುಂದೆ ತಾಯಿ ಮತ್ತು ತಮ್ಮ ಇಬ್ಬರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಅಪ್ರಾಪ್ತ ತನ್ನ ತಾಯಿಯೊಂದಿಗೆ ಸೇರಿಕೊಂಡು ಸಹೋದರಿಯ ತಲೆಯನ್ನು ಕುಡುಗೋಲಿನಿಂದ ಕತ್ತರಿಸಿದ್ದಾನೆ. ನಂತರ ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡು ಸ್ನೇಹಿತರಿಗೆಲ್ಲಾ ಶೇರ್ ಮಾಡಿದ್ದಾನೆ.
ತಲೆಯೊಂದಿಗೆ ಊರೆಲ್ಲಾ ಮೆರವಣಿಗೆ ಹೊರಟು ನೆರೆಹೊರೆಯವರಿಗೆ ತೋರಿಸಿ ವಿಚಿತ್ರವಾಗಿ ವರ್ತಿಸಿದ್ದಾರೆ.
ವೈಜಾಪುರ್ ತೆಹಸಿಲ್ನ ಲಾಡ್ಗಾಂವ್ ಎಂಬಲ್ಲಿ ಭಾನುವಾರ ಈ ಕೃತ್ಯ ನಡೆದಿದೆ. ಕುಟುಂಬದವರ ವಿರೋಧದ ನಡುವೆಯೂ ಬೇರೆ ಜಾತಿಯ ಯುವಕನನ್ನು ಮದುವೆಯಾಗಿದ್ದೇ ಹತ್ಯೆಗೆ ಕಾರಣ ಎನ್ನಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಹಾಗೂ ಆತನ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೀರ್ತಿ (19) ಕೊಲೆಯಾದ ಯುವತಿ. ಈಕೆ ಅದೇ ಗ್ರಾಮದ ಅಜಯ್ ಎಸ್.ಥೋರ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಕೆಲ ದಿನಗಳ ಹಿಂದೆ ಇಬ್ಬರೂ ಮದುವೆಯಾಗಿ ಗ್ರಾಮಕ್ಕೆ ಹಿಂತಿರುಗಿದ್ದಾರೆ. ನಂತರ ಕೀರ್ತಿ ತನ್ನ ಪತಿ ಅಜಯ್ ಮನೆಯಲ್ಲಿ ನೆಲೆಸಿದ್ದರು. 
ಪತಿ ಮನೆಯಲ್ಲಿದ್ದ ಕೀರ್ತಿಯನ್ನು ಭೇಟಿಯಾಗುವ ನೆಪದಲ್ಲಿ ಬಂದಿದ್ದ ಸಹೋದರ ಹಾಗೂ ತಾಯಿ ಹೋಗಿದ್ದಾರೆ. ಇಬ್ಬರಿಗೂ ಟೀ ಮಾಡಿಕೊಡಲು ಕಿಚನ್ಗೆ ಕೀರ್ತಿ ತೆರಳಿದ್ದಾರೆ. ಈ ವೇಳೆ ಇಬ್ಬರೂ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments