Webdunia - Bharat's app for daily news and videos

Install App

ಪುತ್ರಿಯ ಮೇಲೆ ರೇಪ್ ಎಸಗಿದಾತನಿಗೆ ಆಫರ್ ನೀಡಿದ ಮಹಾತಾಯಿ

Webdunia
ಶುಕ್ರವಾರ, 17 ನವೆಂಬರ್ 2023 (12:51 IST)
ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ, ರಜೆ ದಿನಗಳಲ್ಲಿ ತಾಯಿಯನ್ನು ಭೇಟಿ ಮಾಡಲು ತೆರಳಿದ್ದಳು.ಅಲ್ಲಿಯೇ ಆರೋಪಿಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಬಾಲಕಿಯನ್ನು ಖರೀದಿಸಿದ ಕೇಂಡ್ರಾ ಎನ್ನುವ ವ್ಯಕ್ತಿಯೊಬ್ಬ ಆಕೆಯನ್ನು ವೇಶ್ಯಾವಾಟಿಕೆಗೆ 1 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿದ್ದನು. ಗ್ರಾಹಕರ ಮುಂದೆ ನೃತ್ಯ ಮಾಡುವಂತೆ ಒತ್ತಾಯಿಸಲಾಗಿತ್ತು. ಇಲ್ಲವಾದಲ್ಲಿ ದೈಹಿಕ, ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
 
ಅತ್ಯಾಚಾರವೆಸಗಿದ ಆರೋಪಿಗೆ ತನ್ನ 12 ವರ್ಷ ವಯಸ್ಸಿನ ಪುತ್ರಿಯನ್ನು 1 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿದ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಲಕಿಯನ್ನು ಖರೀದಿಸಿದ ವ್ಯಕ್ತಿ ವೇಶ್ಯಾವಾಟಿಕೆಗೆ ತಳ್ಳುವ ಮೊದಲು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ವೇಶ್ಯಾವಾಟಿಕೆ ಜಾಲದಿಂದ ಪಾರಾಗುವಲ್ಲಿ ಯಶಸ್ವಿಯಾದ ಬಾಲಕಿ ಎನ್‌ಜಿಒ ಸಂಸ್ಥೆಯ ಮೂಲಕ ಪೊಲೀಸ್ ಠಾಣೆಗೆ ತೆರಳಿ ತನ್ನ ತಾಯಿ ಮತ್ತು ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
 
ಕೆಲ ದಿನಗಳ ನಂತರ ಬಾಲಕಿ ತನ್ನ ಶಾಲೆಯ ಶಿಕ್ಷಕಿಯನ್ನು ದೂರವಾಣಿ ಮೂಲಕ ಸಂಪರ್ಕಿಸುವಲ್ಲಿ ಯಶಸ್ವಿಯಾಗಿ ಘಟನೆಯ ವಿವರ ನೀಡಿದ್ದಾಳೆ. ವೇಶ್ಯಾವಾಟಿಕೆಯಿಂದ ತಪ್ಪಿಸಿಕೊಂಡು ಹೋಗಿ ಪೊಲೀಸರ ಮತ್ತು ಎನ್‌ಜಿಓ ಸಹಾಯ ಪಡೆಯುವಂತೆ ಸಲಹೆ ನೀಡಿದ್ದಾಳೆ.
 
ವೇಶ್ಯಾವಾಟಿಕೆ ಜಾಲದಿಂದ ಪಾರಾಗುವಲ್ಲಿ ಯಶಸ್ವಿಯಾಗಿ ಎನ್‌ಜಿಓ ಮುಖ್ಯಸ್ಥ ನೆರವಿನಿಂದ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಬಾಲಕಿಯ ದೂರಿನ ಮೇರೆಗೆ ಆಕೆಯ ತಾಯಿ ಸೇರಿದಂತೆ ಹಲವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ