Publish Date: Thu, 04 Jan 2018 (12:19 IST)
Updated Date: Thu, 04 Jan 2018 (12:21 IST)
ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸಂಸತ್‍ನ ಕಲಾಪ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭ ಕರಂದ್ಲಾಜೆ, ಸುರೇಶ್ ಅಂಗಡಿ, ಪಿ.ಸಿ.ಮೋಹನ್, ಪ್ರತಾಪ್ ಸಿಂಹ, ಶಿವಕುಮಾರ್ ಉದಾಸೀ ಇತರರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದ್ದಾರೆ.
ಪ್ರತಿಭಟನಾ ಫಲಕ ಹಿಡಿದು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಹಿಂದುಗಳ ಮೇಲೆ ನಿರಂತರ ದಬ್ಬಾಳಿಕೆ, ಕೊಲೆ, ಸುಲಿಗೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.