Select Your Language

Notifications

webdunia
webdunia
webdunia
webdunia

ಸಿಎಂ ಮಮತಾ ಬ್ಯಾನರ್ಜಿ ಬಲಗೈ ಬಂಟ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಸಿಎಂ ಮಮತಾ ಬ್ಯಾನರ್ಜಿ ಬಲಗೈ ಬಂಟ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಕೋಲ್ಕತಾ , ಶುಕ್ರವಾರ, 3 ನವೆಂಬರ್ 2017 (19:45 IST)
ಮಾಜಿ ರೈಲ್ವೆ ಸಚಿವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟ್ಟಾ ಬೆಂಬಲಿಗ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಸಹಸಂಸ್ಥಾಪಕರಾಗಿದ್ದ ರಾಯ್ ಅವರನ್ನು ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷಕ್ಕೆ ಆಹ್ವಾನಿಸಲಾಯಿತು. 
 
ಪ್ರಸಕ್ತ ತಿಂಗಳ ಆರಂಭದಲ್ಲಿಯೇ ತೃಣಮಲ ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕಳೆದ ತಿಂಗಳು ಹೇಳಿಕೆ ನೀಡಿದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಟಿಎಂಸಿ ಪಕ್ಷದಿಂದ ರಾಯ್ ಅವರನ್ನು ಉಚ್ಚಾಟಿಸಲಾಗಿತ್ತು.
 
ಮಾಜಿ ಟಿಎಂಸಿ ನಾಯಕ ರಾಯ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅತೃಪ್ತ ಮುಖಂಡರಿಂದ ಬಿಜೆಪಿ ರಥದ ಮೇಲೆ ಕಲ್ಲು ತೂರಾಟ