Select Your Language

Notifications

webdunia
webdunia
webdunia
webdunia

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರು ಸಾವು, ಅವಶೇಷಗಳಡಿಯಲ್ಲಿ ಹಲವು ಮಂದಿ

Multi-storied building collapse

Sampriya

ಮೊಹಾಲಿ , ಭಾನುವಾರ, 22 ಡಿಸೆಂಬರ್ 2024 (12:10 IST)
ಮೊ
Photo Courtesy X
ಹಾಲಿ: ಇಲ್ಲಿನ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ವಿವಾಹಿತ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಹಲವು ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ.

ಥಿಯೋಗ್‌ ಪ್ರದೇಶದ ದೃಷ್ಟಿ ವರ್ಮಾ (20) ಮೃತ ಮಹಿಳೆ, ಈಕೆ ಮೂಲತಃ ಹಿಮಾಚಲ ಪ್ರದೇಶದವರು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಮತ್ತೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ, ಗುರುತು ಪತ್ತೆಯಾಗಿಲ್ಲ. ಇನ್ನೂ ಐದಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಶನಿವಾರ ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಕುಟುಂಬದ 6 ಮಂದಿ ಸಾವು ಪ್ರಕರಣ: ಮುಗಿಲು ಮುಟ್ಟಿದ ಆಕ್ರಂದನದ ಮಧ್ಯೆ ಅಂತ್ಯಕ್ರಿಯೆ