Select Your Language

Notifications

webdunia
webdunia
webdunia
webdunia

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಮುಂಬೈ , ಭಾನುವಾರ, 16 ಏಪ್ರಿಲ್ 2017 (12:41 IST)
ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭಾರಿ ಭದ್ರತೆಯನ್ನು ಒದಗಿಸಲಾಗಿದ್ದು, ಭದ್ರತಾ ಪಡೆಗಳು ನಿಲ್ದಾಣದಲ್ಲಿ ಶೋಧ ಕಾರ್ಯ ಆರಂಭಿಸಿವೆ.
 
ದೇಶಾದ್ಯಂತ, ಮುಂಬೈ, ಚೆನ್ನೈ, ಹೈದ್ರಾಬಾದ್, ಕೋಲ್ಕತಾ ಸೇರಿದಂತೆ ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿಮಾನ ನಿಲ್ದಾಣದ ಹತ್ತಿರವಿರುವ ಎಲ್ಲಾ ಪ್ರದೇಶಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
 
ಮುಂಬೈ ವಿಮಾನ ನಿಲ್ದಾಣವನ್ನು ಸ್ಫೋಟಿಸಲಾಗುವುದು ಮತ್ತು ವಿಮಾನ ಅಪಹರಿಸಲಾಗುವುದು ಎನ್ನುವ ಕರೆ ಎಲ್ಲಿಂದ ಬಂದಿದೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 
ಚೆನ್ನೈ ವಿಮಾನ ನಿಲ್ದಾಣದ ಆವರಣದೊಳಗೆ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಗಮನಿಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹೈಜಾಕ್ ಬೆದರಿಕೆ: ಏರ್ ಪೋರ್ಟ್ ಗಳಲ್ಲಿ ಹೈ ಅಲರ್ಟ್