Select Your Language

Notifications

webdunia
webdunia
webdunia
webdunia

ನವವಧುವಿನ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಮಾವ

ನವವಧುವಿನ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಮಾವ
ಮುಂಬೈ , ಶನಿವಾರ, 13 ಸೆಪ್ಟಂಬರ್ 2014 (15:42 IST)
ಕೇವಲ ಎರಡು ತಿಂಗಳುಗಳ ಹಿಂದೆ ವಿವಾಹವಾಗಿ ಮನೆಗೆ ಬಂದ ಸೊಸೆಯ ಮೇಲೆ ಮಾವನೇ ಅತ್ಯಾಚಾರವೆಸಗಿ ಪರಾರಿಯಾದ ಪ್ರಕರಣ ನಗರದ ದಹಿಸಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 
 
ನಿನ್ನೆ ಬೆಳಿಗ್ಗೆ 8 ಗಂಟೆಗೆ ಪುತ್ರ ಕೆಲಸದ ನಿಮಿತ್ಯ ಹೊರಗಡೆ ಹೋದಾಗ ಮನೆಯಲ್ಲಿ ಏಕಾಂಗಿಯಾಗಿದ್ದ ಸೊಸೆಯ ಮೇಲೆ ಅತ್ಯಾಚಾರವೆಸಗಿದ ಮಾವ ಮನೆಯಿಂದ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಅತ್ಯಾಚಾರಕ್ಕೊಳಗಾದ ಮಹಿಳೆ ಪತಿಗೆ ವಿಷಯ ತಿಳಿಸಿದ್ದಲ್ಲದೇ ದಹೀಸಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.    
 
ಅತ್ಯಾಚಾರ ಘಟನೆಯ ನಂತರ ಆರೋಪಿ ಪರಾರಿಯಾಗಿದ್ದು, ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ದಹೀಸಾರ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತ ದೀಲಿಪ್ ರುಪ್‌ವಾಟೆ ತಿಳಿಸಿದ್ದಾರೆ 
 
ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್‌ಗಳು ದಾಖಲಾಗಿಲ್ಲ. ಆದರೆ, ನೆರೆಹೊರೆಯವರ ಪ್ರಕಾರ ಆತನ ನಡುವಳಿಕೆ ಸರಿಯಾಗಿರಲಿಲ್ಲ. ಮಾವನ ವರ್ತನೆಯ ಬಗ್ಗೆ ಅತ್ಯಾಚಾರಕ್ಕೊಳಗಾದ ಮಹಿಳೆ ಈ ಮೊದಲು ತನ್ನ ಪತಿಗೆ ಮಾಹಿತಿ ನೀಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
 

Share this Story:

Follow Webdunia kannada