Publish Date: Fri, 29 Dec 2017 (08:59 IST)
Updated Date: Fri, 29 Dec 2017 (09:01 IST)
ಮುಂಬೈ: ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕಮಲಾ ಮಿಲ್ಸ್ ಕಂಪೌಂಡ್ ಬಹುಮಹಡಿ ಕಟ್ಟಡದ ಸುತ್ತಮುತ್ತ ಹಲವು ರೆಸ್ಟೋರೆಂಟ್ ಗಳು, ವಾಣಿಜ್ಯ ಕಚೇರಿಗಳು, ವಸತಿ ಗೃಹಗಳಿದ್ದು, ತಡರಾತ್ರಿ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇಲ್ಲಿ ಪಾರ್ಟಿಯೊಂದು ನಡೆಯುತ್ತಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದ್ದಾರೆ. ಹಾಗಾಗಿ ಮೃತರಲ್ಲಿ ಹೆಚ್ಚಿನವರು ಮಹಿಳೆಯರೇ ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ