ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಪ್ಪಿಸಿಕೊಳ್ಳಲು ಕೆಲವರು ಕಿಟಕಿಯಿಂದ ಹೊರಗೆ ಹಾರಿದ ದೃಶ್ಯಗಳು ಘಟನೆಯ ಭೀಕರತೆಗೆ ಸಾಕ್ಷಿಗಳಾಗಿವೆ.
ದೆಹಲಿಯ ಮುಂಡ್ಕಾದಲ್ಲಿ ಶುಕ್ರವಾರ ಸಂಜೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ರಾತ್ರಿ 10 ಗಂಟೆ ಕಳೆದರೂ ನಂದಿಸಲು ಸಾಧ್ಯವಾಗಿಲ್ಲ. ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲವರು ಮುಚ್ಚಿದ್ದ ಕಿಟಕಿ ಒಡೆದು ಹೊರೆಗೆ ಹಾರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.
ದುರಂತದಲ್ಲಿ 27 ಮಂದಿ ಅಸುನೀಗಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಮೇಲಿನಿಂದ ಹಾರಿದವರೂ ಸೇರಿದ್ದಾರೆ.
ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮಾಲೀಕ ನಿಯಮ ಪಾಲಿಸದೇ ಕಟ್ಟಡ ಕಟ್ಟಿದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ.