Select Your Language

Notifications

webdunia
webdunia
webdunia
webdunia

ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ!

ಲಕ್ನೋ
ಲಕ್ನೋ : ವ್ಯಕ್ತಿಯೊಬ್ಬ ತನ್ನ ಹೆಸರು ವಿಳಾಸದ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿ ಲಕೋಟೆಯ ಮೇಲೆ ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಸಹ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ನನ್ನ ಹೆಸರು ಮೊಹಮ್ಮದ್ ಅಜ್ಮಲ್, ನೀವು ನನಗೆ ಹಾನಿ ಮಾಡಲು ಸಾಧ್ಯವಿಲ್ಲ. ನಿಮ್ಮ ಕೌಂಟ್ಡೌನ್ ಇಂದಿನಿಂದ ಪ್ರಾರಂಭವಾಗಿದೆ. ಮುಖ್ಯಮಂತ್ರಿಗೆ ಭದ್ರತೆ ಇದೆ, ಇಲ್ಲದಿದ್ದರೆ ಅವರನ್ನೂ ಸ್ಫೋಟಿಸಲಾಗುತ್ತಿತ್ತು. ಅಲ್ಲದೇ ಪತ್ರ ಕಳುಹಿಸಿದವ  ಗೌಶಾಲಾ ಸಮೀಕ್ಷೆ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ಇನ್ನು ರಂಜಿತ್ ಬಚ್ಚನ್ ಮತ್ತು ಕಮಲೇಶ್ ತಿವಾರಿ ಹತ್ಯೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಉನ್ನಾವೋದ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಳಾಸವನ್ನು ದೇವಬಂದ್ ಎಂದು ಬರೆಯಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸಿಗರಿಗೆ ಗುಡ್‍ನ್ಯೂಸ್!