Murshidabad ನಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದ್ದರೆ ಮೂಕರಂತೆ ನಿಂತಿದ್ದ ಪೊಲೀಸರು

Krishnaveni K
ಗುರುವಾರ, 22 ಮೇ 2025 (10:48 IST)
ಕೋಲ್ಕತ್ತಾ: ವಕ್ಫ್ ವಿರುದ್ಧ ಪ್ರತಿಭಟನೆ ವೇಳೆ ಮುರ್ಷಿದಾಬಾದ್ ನಲ್ಲಿ ಹಿಂದೂಗಳ ಮೇಲೆ ಹಿಂಸೆ, ದಾಳಿಗಳಾಗುತ್ತಿದ್ದರೆ ಪೊಲೀಸರು ಮೂಕ ಸಾಕ್ಷಿಗಳಂತೆ ನಿಂತಿದ್ದರು ಎಂದು ವರದಿ ಬಹಿರಂಗಪಡಿಸಿದೆ.

ಮುರ್ಷಿದಾಬಾದ್ ಘಟನೆ ಬಗ್ಗೆ ಹೈಕೋರ್ಟ್ ರಚಿಸಿದ್ದ ತನಿಖಾ ಸಮಿತಿ ವರದಿ ನೀಡಿದೆ. ಈ ವರದಿಯಲ್ಲಿ ಆಘಾತಕಾರೀ ಅಂಶಗಳು ಬಯಲಾಗಿವೆ. ಕಳೆದ ತಿಂಗಳು ವಕ್ಫ್ ಪ್ರತಿಭಟನೆ ವೇಳೆ ಮುಸ್ಲಿಮರೇ ಬಹುಸಂಖ್ಯಾತರಾಗಿರುವ ಮುರ್ಷಿದಾಬಾದ್ ನಲ್ಲಿ ಹಿಂದೂಗಳ ಹತ್ಯೆ, ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ತನಿಖಾ ವರದಿ ತಯಾರಿಸಿರುವ ಹೈಕೋರ್ಟ್ ಸಮಿತಿ ಪೊಲೀಸರು ಇದ್ದರೂ ಜನರ ಸಹಾಯಕ್ಕೆ ಬಂದಿರಲಿಲ್ಲ ಎಂದಿದೆ. ಶಾಸಕರ ಎದುರೇ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಶಾಸಕ ಅಮೂರುಲ್ ಇಸ್ಲಾಂ ಬೇದ್ವಾನಾ ಗ್ರಾಮಕ್ಕೆ ಬಂದು ಯಾವ ಮನೆಗಳಿಗೆ ಬೆಂಕಿ ಹಚ್ಚಿಲ್ಲ ಎಂದು ಪರಿಶೀಲಿಸಿ ಹೋಗಿದ್ದರು. ಬಳಿಕ ಪ್ರತಿಭಟನಾಕಾರರು ಆ ಮನೆಗಳಿಗೆ ಬೆಂಕಿ ಹಚ್ಚಿದರು. ಈ ಮನೆಗಳು ಯಾವುದೂ ಈಗ ವಾಸಕ್ಕೆ ಯೋಗ್ಯವಾಗಿಲ್ಲ. ಪೊಲೀಸರು ಸ್ಥಳದಲ್ಲಿದ್ದರೂ ಜನರಿಗೆ ಸಹಾಯ ಮಾಡಲಿಲ್ಲ. ಬೆಂಕಿ ನಂದಿಸಲು ಸಹಾಯವಾಗದಂತೆ ನೀರಿನ ಸಂಪರ್ಕ ಕಡಿತಗೊಳಿಸಿದ್ದರು ಎಂಬ ಆಘಾತಕಾರೀ ಅಂಶಗಳು ವರದಿಯಲ್ಲಿ ಬಯಲಾಗಿದೆ. ಜೊತೆಗೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡಲು ಸಲಹೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಮುಂದಿನ ಸುದ್ದಿ
Show comments