Select Your Language

Notifications

webdunia
webdunia
webdunia
webdunia

ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Gyanvapi mosque

Krishnaveni K

ನವದೆಹಲಿ , ಶುಕ್ರವಾರ, 2 ಫೆಬ್ರವರಿ 2024 (14:38 IST)
ನವದೆಹಲಿ: ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆಗೆ ನಿರ್ಬಂಧ ಹೇರಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಳ್ಳಿ ಹಾಕಿದೆ.

ಸದ್ಯಕ್ಕೆ ಹಿಂದೂಗಳ ಪೂಜೆಗೆ ನಿರ್ಬಂಧ ವಿಧಿಸಲಾಗದು. ಫೆಬ್ರವರಿ 6 ರವರೆಗೆ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಆದರೆ ಈಗ ಮಸೀದಿ ಸಮಿತಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ. ಅಲ್ಲಿಯವರೆಗೆ ಹಿಂದೂಗಳ ಪೂಜೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆ ದಿನ ಪುರಾತತ್ವ ಇಲಾಖೆಯ ಸಮೀಕ್ಷಾ ವರದಿಯೂ ವಿಚಾರಣೆಗೆ ಬರಲಿದೆ. ಸದ್ಯಕ್ಕೆ ಉತ್ತರ ಪ್ರದೇಶ ಸರ್ಕಾರವೇ ಈ ವಿವಾದಿತ ಸ್ಥಳದ ಮೇಲುಸ್ತುವಾರಿ ವಹಿಸಲು ಕೋರ್ಟ್ ಸೂಚನೆ ನೀಡಿದೆ.

ಕೋರ್ಟ್ ತೀರ್ಪಿನ ಬೆನ್ನಲ್ಲೇ ಈಗಾಗಲೇ ವಾರಣಾಸಿಯ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜೆ ಆರಂಭಿಸಿದ್ದಾರೆ. ಈ ವಿಚಾರವನ್ನೂ ಕೋರ್ಟ್ ಗೆ ಮನವರಿಕೆ ಮಾಡಲಾಗಿದೆ. ಮೊದಲ ದಿನದಿಂದಲೇ ಸಾಕಷ್ಟು ಜನ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಇದೀಗ ಅಲ್ಲಿ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆಯೂ ಉತ್ತರ ಪ್ರದೇಶ ಸರ್ಕಾರದಿಂದ ಕೋರ್ಟ್ ವಿವರಾದ ಮಾಹಿತಿ ಕೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಖಂಡರು ಬ್ಲಾಕ್ ಮೇಲ್ ಮಾಡ್ತಾ ಇದಾರೆ-ನಿಖಿಲ್ ಕುಮಾರಸ್ವಾಮಿ