ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿದ್ದರಿಂದ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ನಾನು ಪಕ್ಷದ ಉನ್ನತ ನಾಯಕರ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ನಂಬರ್ ಒನ್ ನಾಯಕಿ ಸೋನಿಯಾ ಗಾಂಧಿ ನಂಬರ್ 2 ನಾಯಕ ರಾಹುಲ್ ಗಾಂಧಿ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಸಲಹೆಗಳನ್ನು ನೀಡಲಾಗಿತ್ತು. ಅದರಂತೆ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದೇನೆಯೇ ಹೊರತು ಬೇರೆ ಅರ್ಥದಲ್ಲಿ ಅಲ್ಲ ಎಂದು ತಿಳಿಸಿದ್ದಾರೆ.
ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸುತ್ತಿದ್ದಂತೆ ಟ್ವೀಟ್ ಮಾಡಿದ ದಿಗ್ವಿಜಯ್ ಸಿಂಗ್, ಇಂದಿನ ಫಲಿತಾಂಶ ನಿರಾಶಾದಾಯಕವಾಗಿದೆ ಮತ್ತು ಅನಿರೀಕ್ಷಿತವಾಗಿವೆ. ಹಲವು ಬಾರಿ ಸೋಲಿನ ಬಗ್ಗೆ ಪರಾಮರ್ಶೆ ಮಾಡಿದ್ದೇವೆ. ಇದೀಗ ಕಠಿಣ ನಿರ್ಧಾರ ತೆಗೆದುಕೊಳ್ಳುವ ಕಾಲ ಎಂದು ಪೋಸ್ಟ್ ಮಾಡಿದ್ದರು.
ಕಾಂಗ್ರೆಸ್ ಪಕ್ಷದ ಚುನಾವಣೆ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿಕೆ ನೀಡಿದ ನಂತರವೂ ದಿಗ್ವಿಜಯ್ ಸಿಂಗ್ ಬೇರೆ ರೀತಿ ಹೇಳಿಕೆ ನೀಡಿರುವುದು ಹೈಕಮಾಂಡ್ ಕೆಂಗೆಣ್ಣಿಗೆ ಗುರಿಯಾಗಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಆಸ್ಸಾಂ ಮತ್ತು ಕೇರಳ ರಾಜ್ಯಗಳ ಅಧಿಕಾರ ಕಳೆದುಕೊಂಡ ಕಾಂಗ್ರೆಸ್, ಬಂಗಾಳ ಮತ್ತು ತಮಿಳುನಾಡಿನಲ್ಲಿ ಹೆಚ್ಚಿನ ಪ್ರಾಬಲ್ಯ ಮೆರೆಯಲು ಸಾಧ್ಯವಾಗಿರಲಿಲ್ಲ.
ಕೇಂದ್ರ ಸಚಿವ ಅರುಣ್ ಜೇಟ್ಲಿ ಕಾಂಗ್ರೆಸ್ ಪಕ್ಷ ಇದೀಗ ತೃತಿಯ ರಂಗದಂತಾಗಿದೆ ಎಂದು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅತಿ ದೊಡ್ಡ ವಿಪಕ್ಷವಾಗಿದೆ ಎನ್ನುವುದು ಮರೆಯಬಾರದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.