ನವದೆಹಲಿ: ನನ್ನ ಹೆಸರು ಅರವಿಂದ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ ಎಂದು ತಿಹಾರ್ ಜೈಲಿನಿಂದ ದೆಹಲಿ ಮುಖ್ಯಮಂತ್ರಿ ದೇಶದ ಜನರಿಗೆ ಸಂದೇಶ ಕಳುಹಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಹಾರ್ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್ ನ ಜತೆ ಆತನ ಪತ್ನಿಗೆ ಹಾಗೂ ವಕೀಲರನ್ನು ಬ್ಯಾರಕ್‌ನಲ್ಲಿ ಭೇಟಿಯಾಗಲು ಅನುಮತಿ ನೀಡಲಾಗಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದ ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್ ಅವರನ್ನು ಗಾಜಿನ ಗೋಡೆ ಇತ್ತು ಎಂದು ಸಿಂಗ್ ಬೇಸರ ವ್ಯಕ್ತಪಡಿಸಿದರು.
ಇನ್ನೂ ಜೈಲಿನಲ್ಲಿ ತನ್ನನ್ನು ನಡೆಸಿಕೊಳ್ಳುವ ರೀತಿಯಿಂದ ನೊಂದಿರುವ ಅರವಿಂದ್ ಅವರು ದೇಶದ ಜನರಿಗೆ 'ನನ್ನ ಹೆಸರು ಅರವಿಂದ ಕೇಜ್ರಿವಾಲ್ ಮತ್ತು ನಾನು ಭಯೋತ್ಪಾದಕನಲ್ಲ' ಎಂದು ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು.