Webdunia - Bharat's app for daily news and videos

Install App

ಕಾಡುತ್ತಿರುವ ಬೆನ್ನುನೋವು: ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಬಿಜೆಪಿ ನಾಯಕಿ ಖುಷ್ಬೂ ಸುಂದರ್

Sampriya
ಸೋಮವಾರ, 8 ಏಪ್ರಿಲ್ 2024 (14:23 IST)
Photo Courtesy X
ಚೆನ್ನೈ: ಅನಾರೋಗ್ಯದ ಹಿನ್ನೆಲೆ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕಿ, ನಟಿ ಖುಷ್ಭೂ ಸುಂದರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಖುಷ್ಬೂ ಅವರು, '2019ರಲ್ಲಿ ಮೂಳೆ ಮುರಿತ ಅನುಭವಿಸಿದ್ದೆ, ಅದರ ನೋವು ಕಳೆದ ಐದು ವರ್ಷಗಳಿಂದ ನನ್ನನ್ನು ಕಾಡುತ್ತಿದೆ. ಹೀಗಾಗಿ ಹೆಚ್ಚು ಹೊತ್ತು ಕುಳಿತುಕೊಳ್ಳುವಂತಿಲ್ಲ, ಅಲ್ಲದೆ ದೂರದ ಪ್ರಯಾಣ ಮಾಡುವಂತಿಲ್ಲ, ಆದರೆ ಇವರೆಡು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುಖ್ಯ. ಆದ್ದರಿಂದ ಈ ಬಾರಿಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಖುಷ್ಬೂ ಅವರು ವೈದ್ಯರ ಸಲಹೆಯ ಹೊರತಾಗಿಯೂ ಕೆಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ. ವೈದ್ಯರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2020ರಲ್ಲಿ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಅವರನ್ನು 2021ರಲ್ಲಿ ಭಾರತೀಯ ಜನತಾ ಪಕ್ಷವು ತಮಿಳುನಾಡು ವಿಧಾನಸಭೆ ಚುನಾವಣೆಗೆ ಚೆನ್ನೈನ ಥೌಸ್ ಲೈಟ್ಸ್ ಕ್ಷೇತ್ರದಿಂದ ಖುಷ್ಬು ಅವರನ್ನು ಕಣಕ್ಕಿಳಿಸಿತ್ತು. ಆದರೆ  ಅವರು ದ್ರಾವಿಡ ಮುನ್ನೇತ್ರ ಕಳಗಂನ ಎಜಿಲನ್ ಎನ್ ವಿರುದ್ಧ 32,200 ಮತಗಳ ಅಂತರದಿಂದ ಸೋತರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments