Select Your Language

Notifications

webdunia
webdunia
webdunia
webdunia

ನಮಾಜ್ ವಿವಾದ : ವಿವಿಯಿಂದ ಹೊರನಡೆದ 60 ನೈಜೀರಿಯಾ ವಿದ್ಯಾರ್ಥಿಗಳು?

ನಮಾಜ್ ವಿವಾದ : ವಿವಿಯಿಂದ ಹೊರನಡೆದ 60 ನೈಜೀರಿಯಾ ವಿದ್ಯಾರ್ಥಿಗಳು?
ಚಂಡೀಗಢ , ಮಂಗಳವಾರ, 18 ಅಕ್ಟೋಬರ್ 2022 (14:52 IST)
ಚಂಡೀಗಢ : ಭಾರತೀಯ ವಿದ್ಯಾರ್ಥಿಗಳು ನಮ್ಮನ್ನು ಥಳಿಸಿದ್ದಾರೆ ಎಂದು ಆರೋಪಿಸಿದ ಸುಮಾರು 60 ನೈಜೀರಿಯಾದ ವಿದ್ಯಾರ್ಥಿಗಳು ಕ್ಯಾಂಪಸ್ನಿಂದ ಹೊರನಡೆದಿರುವ ಘಟನೆ ಗುರುಗ್ರಾಮದ ಜಿಡಿ ಗೋಯೆಂಕಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವರದಿಗಳ ಪ್ರಕಾರ ಆಟದ ಮೈದಾನದಲ್ಲಿ ನಮಾಜ್ ಮಾಡಿದ ವಿಷಯಕ್ಕೆ ಭಾರತೀಯ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು.

ಬಳಿಕ ನೈಜೀರಿಯಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಕೊಠಡಿಯೊಳಗೆ ನಮಾಜ್ ಮಾಡುವಂತೆ ಕೇಳಿಕೊಂಡಿದ್ದಾರೆ. ಮೊದಲಿಗೆ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಪೊಲೀಸರು ಹಾಗೂ ವಿಶ್ವವಿದ್ಯಾಲಯದ ಆಡಳಿತ ತಿಳಿಸಿತ್ತು.

ಆದರೆ ಇದೀಗ ತಮ್ಮ ಮೇಲೆ ಭಾರತೀಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದಾಗಿ ನೈಜೀರಿಯಾದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದುವರೆದ ಸಿಎಂ ಬೊಮ್ಮಾಯಿ‌ ರಾಜ್ಯ ಪ್ರವಾಸ