ನರೇಂದ್ರ ಮೋದಿ 3.0 ಈಗ ಶುರು: ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ ಮೋದಿ

Krishnaveni K
ಭಾನುವಾರ, 9 ಜೂನ್ 2024 (19:44 IST)
ನವದೆಹಲಿ: ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಗಣ್ಯರ ಮುಂದೆ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ ಕೂಡಲೇ ಮೊದಲು ರಾಷ್ಟ್ರಗೀತೆ ಮೊಳಗಿಸಲಾಯಿತು.

ಬಳಿಕ ರಾಷ್ಟ್ರಪತಿಗಳ ಅನುಮೋದನೆ ಪಡೆದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭಿಸಲಾಯಿತು. ಆರಂಭದಲ್ಲಿ ನರೇಂದ್ರ ಮೋದಿಯವರನ್ನು ಕರೆಯಲಾಯಿತು. ಮೋದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಬಳಿಕ ರಾಜನಾಥ್ ಸಿಂಗ್ ಗೆ ಪ್ರಮಾಣ ವಚನ ಬೋಧಿಸಲಾಯಿತು.

ಬಳಿಕ ಕ್ರಮ ಪ್ರಕಾರವಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಬ್ಬರಾದ ಮೇಲೊಬ್ಬರಂತೆ ಪ್ರಮಾಣ ವಚನ ಸ್ವೀಕಾರ ಮಾಢಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments