Select Your Language

Notifications

webdunia
webdunia
webdunia
webdunia

ಗುಜರಾತ್ ಗೆಲುವಿಗೆ ಭಾವುಕರಾದ ನರೇಂದ್ರಮೋದಿ

ನರೇಂದ್ರಮೋದಿ
ಗುಜರಾತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಭಾವುಕರಾಗಿ ಮಾತನಾಡಿದ್ದಾರೆ.
 
ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿದ ನಂತರ ನಡೆದಿರುವ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು. ಇಂದಿರಾ ಗಾಂಧಿ ಪ್ರಧಾನಮಂತ್ರಿ ಆಗಿದ್ದಾಗ ಕಾಂಗ್ರೆಸ್ 18 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಆದರೆ, ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವುದು ನಮಗೆ ಸಿಕ್ಕ ಅಭೂತಪೂರ್ವ ಜಯ ಎಂದು ಭಾವುಕರಾಗಿ ನುಡಿದ್ದಾರೆ.
 
ಗುಜರಾತ್‌ನಲ್ಲಿ ಬಿಜೆಪಿ ಹಂತ ಹಂತವಾಗಿ ಬೆಳೆಯುತ್ತಾ ಬಂದ ಹಾದಿಯನ್ನು ಸ್ಮರಿಸಿದ, ಮೋದಿ ವಿರೋಧ ಪಕ್ಷಗಳ ವಿರುದ್ಧ ಅಸಮಾಧಾನ ಹೊರಹಾಕಿದರು. ಬಿಜೆಪಿ ಸಂಸದರು ಎದ್ದು ನಿಂತು ಗೌರವಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವೆ ಅಸ್ವಸ್ಥ– ಆಸ್ಪತ್ರೆಗೆ ದಾಖಲು