Webdunia - Bharat's app for daily news and videos

Install App

ಉದ್ಯೋಗ ಸೃಷ್ಟಿ, ಕೃಷಿ ಕ್ಷೇತ್ರದಲ್ಲಿ ಮೋದಿ ಸರಕಾರ ಸಂಪೂರ್ಣ ವಿಫಲ: ಕಾಂಗ್ರೆಸ್

Webdunia
ಭಾನುವಾರ, 29 ಮೇ 2016 (14:41 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲವಾಗಿದ್ದಲ್ಲದೇ ಕೃಷಿ ಕ್ಷೇತ್ರದಲ್ಲಿ ಸರಕಾರದ ಸಾಧನೆ ಶೂನ್ಯವಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಕೇಂದ್ರ ಸರಕಾರ ಕೃಷಿ ಕ್ಷೇತ್ರದಲ್ಲಿ ಸಾಧನೆ ಶೂನ್ಯವಾಗಿದೆ. ದೇಶದಲ್ಲಿ ಅಭಿವೃದ್ಧಿ ದರ ಶೂನ್ಯಕ್ಕಿಂತ ಕೆಳಗಿದೆ ಎಂದು ಆರೋಪಿಸಿದ್ದಾರೆ. 
 
ದೇಶದ ಶೇ.70 ರಷ್ಟು ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶಗಳ ಜನತೆಗಾಗಿ ಮೋದಿ ಯಾವುದೇ ಮಹತ್ವದ ಯೋಜನೆಗಳನ್ನು ಘೋಷಿಸಿಲ್ಲ ಎಂದು ಕಿಡಿಕಾರಿದರು.
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಎರಡು ವರ್ಷಗಳ ಅವಧಿಯಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
 
ಮೋದಿ ಸರಕಾರದ ಅವಧಿಯಲ್ಲಿ ಸಂತಸ ಪಡುವ ವಿಷಯವೆಂದರೆ ಅಲ್ಪ ಪ್ರಮಾಣದಲ್ಲಿ ಜಿಡಿಪಿ ದರದಲ್ಲಿ ಹೆಚ್ಚಳವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments