Webdunia - Bharat's app for daily news and videos

Install App

4ನೇ ಬಾರಿ ಸಿಎಂ ಆಗಿದ್ರೂ ನನ್ನ ತಾಯಿ ಅಟೋದಲ್ಲಿ ತಿರುಗಾಡುತ್ತಾಳೆ: ಮೋದಿ

Webdunia
ಶುಕ್ರವಾರ, 2 ಮೇ 2014 (15:14 IST)
ಗುಜರಾತ್ ರಾಜ್ಯದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದೇನೆ. ಆದರೆ, ನನ್ನ 
 
ಇಳಿವಯಸ್ಸಿನ ತಾಯಿ ಮತದಾನ ಮಾಡಲು ಅಟೋರಿಕ್ಷಾದಲ್ಲಿ ತೆರಳಿದ್ದಾಳೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ.  
 
 
ಸಂತ ಕಬೀರ್ ಗನರ್ ಜಿಲ್ಲೆಯ ಖಾಲೀಲಾಬಾದ್‌ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಪಕ್ಷ ಎದುರಿಸುತ್ತಿರುವ ಸಮಸ್ಯೆಗಳನ್ನು ನೆನೆಪಿಸಿಕೊಳ್ಳುವುದೇ ಮುಂದಿನ ದಿನಗಳಲ್ಲಿ ಸೋನಿಯಾ ಗಾಂಧಿಯವರ ಕಾರ್ಯವಾಗಲಿದೆ ಎಂದು ಲೇವಡಿ ಮಾಡಿದ್ದಾರೆ.   
 
 
ಕಳೆದ 20 ರಿಂದ 25 ವರ್ಷಗಳ ಅವಧಿಯಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಸೋನಿಯಾ ಯಾವತ್ತೂ ದೇವರನ್ನು ನೆನೆಪಿಸಿಕೊಂಡಿಲ್ಲ. ಆದರೆ, ಈ ಬಾರಿ ಪ್ರತಿ ಸಾರ್ವಜನಿಕ ಸಭೆಗಳಲ್ಲಿ ದೇವರು ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು. 
 

ಲೋಕಸಭೆ ಚುನಾವಣೆಗಳ ಫಲಿತಾಂಶ ಎನ್‌ಡಿಎ ಪರವಾಗಿ ಬರಲಿರುವುದರಿಂದ ಈಗಾಗಲೇ ಹೊಸ ಸರಕಾರಕ್ಕೆ ಶಂಕು ಸ್ಥಾಪನೆ ನೆರವೇರಿಸಿದಂತಾಗಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದ್ದು, ತಾಯಿ ಮಗನ ಸರಕಾರ ನಾಶವಾಗಲಿದೆ. ತಂದೆ 
 
ಮಗನ ಸರಕಾರ ಕೂಡಾ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಮುಲಾಯಂ ಮತ್ತು ಅಖಿಲೇಶ್ ಅವರಿಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments