Webdunia - Bharat's app for daily news and videos

Install App

ದಲಿತರು, ರೈತರ ‘ಪ್ರವಾಹ’ಕ್ಕೆ ಕೊಚ್ಚಿ ಹೋಗಲಿರುವ ಮೋದಿ: ರಾಹುಲ್ ಕಿಡಿ!

Webdunia
ಶುಕ್ರವಾರ, 13 ಆಗಸ್ಟ್ 2021 (10:47 IST)
ನವದೆಹಲಿ(ಆ.13): ಜಂತರ್ ಮಂತರ್ನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿದ್ದಾರೆ. ರೈತರು, ಬಡವರು, ದಲಿತರು, ಕಾರ್ಮಿಕರ ದನಿ ಒಟ್ಟಾಗಿ ಅವರನ್ನು ಪ್ರಧಾನಿ ಪಟ್ಟದಿಂದ ಕೆಳಗೆ ತಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ನಡೆದ ದಲಿತ ದೌರ್ಜನ್ಯ ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಭಾರತೀಯರಿಗೆ ಪರಿಸ್ಥಿತಿ ಸಂಪೂರ್ಣವಾಗಿ ಅರಿವಾಗಿದೆ. ಬಡವರು ಮತ್ತು ದಲಿತರ ಕೂಗು ದೇಶದಲ್ಲಿ ಎದ್ದಿದೆ. ಇದು ಪ್ರವಾಹದಂತೆ ಅಪ್ಪಳಿಸಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲಿದೆ’ ಎಂದರು.
‘ಭಾರತ ಬಾಬಾಸಾಹೇಬ್ ಮತ್ತು ಗಾಂಧಿಯಂತಹ ಮಹಾನ್ ವ್ಯಕ್ತಗಳನ್ನು ಕಂಡಿದೆ. ಗಾಂಧೀಜಿ ಹೇಳಿದಂತೆ ಯಾವುದಕ್ಕೂ ಹೆದರಬೇಡಿ ಎಂದು ಕಾಂಗ್ರೆಸ್ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದೆ. ರೈತರ, ದಲಿತರ, ಹಿಂದುಳಿದವರ ಪರವಾಗಿ ಸದನದಲ್ಲೂ ಮಾತನಾಡಲು ನಮಗೆ ಬಿಟ್ಟಿಲ್ಲ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸಭೆಯಲ್ಲಿ ಸಂಸದರ ಮೇಲೆ ಹಲ್ಲೆ ಮಾಡಲಾಗಿದೆ. ಕರೋನ ಸಮಯದಲ್ಲಿ ಜನರಿಗೆ ನೇರವಾಗಿ ಹಣ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಮೋದಿ ಸರ್ಕಾರ 4-5 ಉದ್ಯಮಿಗಳಿಗೆ ಹಣ ದೊರೆಯುವಂತೆ ಮಾಡಿದೆ’ ಎಂದು ಅವರು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments