ನವದೆಹಲಿ : ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಅಪರಾಧಿಗಳ ಕ್ಷಮಾಪಣೆಗೆ ತನಿಖಾ ಸಂಸ್ಥೆಯು ಕೇಂದ್ರದಿಂದ ಸೂಕ್ತ ಆದೇಶಗಳನ್ನು ಪಡೆದುಕೊಂಡಿದೆ. 11 ಅಪರಾಧಿಗಳ ಬಿಡುಗಡೆಗೆ ಕೇಂದ್ರವು ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರ ಅಫಿಡವಿಟ್ನಲ್ಲಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಧಾನಿ ವಿರುದ್ಧ ವ್ಯಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿಯವರು ಮಿತವ್ಯಯದ ಭರವಸೆಗಳನ್ನ ನೀಡುತ್ತಿದ್ದಾರೆ. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಅವರ ಮಾತುಗಳು ಮತ್ತು ಉದ್ದೇಶಗಳ ನಡುವೆ ವ್ಯತ್ಯಾಸ ತುಂಬಾ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.