ಇಂಗ್ಲೆಂಡ್ ನೂತನ ಪ್ರಧಾನಿ ತೆರೆಸಾರನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇಂಗ್ಲೆಂಡ್ ಜತೆಗಿನ ದ್ವಿಪಕ್ಷೀಯ ಸಂಬಂಧ ಕುರಿತು ಚರ್ಚೆ ನಡೆಸಿದ್ರು. ಇಂಗ್ಲೆಂಡ್ ಜತೆಗಿನ ಅವಕಾಶಗಳನ್ನು ಹೆಚ್ಚಿಸಿಕೊಳ್ಳುವ ಸಂಬಂಧ ಚರ್ಚೆ ನಡೆಸಿದರು.
ಪ್ರಧಾನಿ ಮೋದಿ ಮೊದಲ ಬಾರಿಗೆ ಇಂಗ್ಲೆಂಡ್ ಪ್ರಧಾನಿ ತೆರೆಸಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ, ದ್ವಿಪಕ್ಷೀಯ ಬಲ ಪಡಿಸುವ ಸಲುವಾಗಿ ಮಾತುಕತೆ ನಡೆಸಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಇಬ್ಬರು ನಾಯಕರು ಹೊರಗೆ ಮಾತುಕತೆ ನಡೆಸಿ ಯುರೋಪಿಯನ್ ಒಕ್ಕೂಟದಿಂದ ಹೊರಬರಲು ಇಂಗ್ಲೆಂಡ್ ಮತ ಚಲಾಯಿಸಿದ ನಂತರ ಅವಕಾಶಗಳ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೂ ಇಂಗ್ಲೆಂಡ್ ನೂತನ ಪ್ರಧಾನಿಯಾಗಿ ತೆರೆಸಾ ಮೆಯವರಿಗೆ ಮೋದಿ ಧನ್ಯವಾದ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ