Publish Date: Sun, 19 May 2019 (11:55 IST)
Updated Date: Sun, 19 May 2019 (11:57 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆ ನಡೆಯುವ ವೇಳೆ ಕೇದರನಾಥ್ ಗುಹೆಯಲ್ಲಿ ಧ್ಯಾನಕ್ಕೆ ಕುಳಿತು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿದ್ದಾರೆ.
ಮೋದಿಯವರ ಕೇದರನಾಥ ಯಾತ್ರೆಯನ್ನು ಎಲ್ಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಚುನಾವಣೆ ಸ್ಪರ್ಧಿಸುತ್ತಿರುವ ಮೋದಿಯವರ ಎರಡುದಿನಗಳ ಕೇದರನಾಥ ಬದ್ರಿನಾಥ ಯಾತ್ರೆಯನ್ನು ರಾಷ್ಟ್ರೀಯ ಮಾಧ್ಯಮ ಸೇರಿದಂತೆ ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದಾರೆ. ಇದು ಮತದಾರರ ಮೇಲೆ ಪ್ರಭಾವ ಬೀರಲಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಕೇದರನಾಥ ಕಾಮಗಾರಿ ವೀಕ್ಷಣೆ ನೆಪದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಯೋಚನೆ ಮೋದಿ ಅವರದು. ಮೋದಿಯ ಈ ಕಾರ್ಯ ಕಾನೂನು ಉಲ್ಲಂಘನೆ ಹಾಗೂ ಅನೈತಿಕವಾಗಿರುವುದು ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.