Publish Date: Fri, 08 Jun 2018 (15:39 IST)
Updated Date: Fri, 08 Jun 2018 (15:41 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವದಂತಿಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಇದು ಜನಪ್ರಿಯತೆಗಾಗಿ ಮೋದಿಯ ಹಳೆ ತಂತ್ರ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅವರು,’ ಪ್ರಧಾನಿ ಮೋದಿ ಹತ್ಯೆಯ ಸಂಚಿನ ಸುದ್ದಿ ಸುಳ್ಳು ಎಂದು ನಾನು ಹೇಳಲಾರೆ. ಆದರೆ ಒಂದಂತೂ ಸತ್ಯ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನಪ್ರಿಯತೆ ಕಡಿಮೆಯಾಗುತ್ತಿದೆ ಎನ್ನಿಸಿದಾಗ ಇಂಥ ಸುದ್ದಿಗಳನ್ನು ಹಬ್ಬಿಸುವ ತಂತ್ರ ಮಾಡುತ್ತಲೇ ಬಂದಿದ್ದಾರೆ. ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಇದನ್ನೇ ಮಾಡಿದ್ದಾರೆ. ಆದ್ದರಿಂದ ಈ ವದಂತಿ ಎಷ್ಟರ ಮಟ್ಟಿಗೆ ಸತ್ಯ ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ