Select Your Language

Notifications

webdunia
webdunia
webdunia
webdunia

ಮೋದಿ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸೀಮಿತ ದಾಳಿ ಪ್ರಸ್ತಾಪ: ಕಾಂಗ್ರೆಸ್

ಮೋದಿ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸೀಮಿತ ದಾಳಿ ಪ್ರಸ್ತಾಪ: ಕಾಂಗ್ರೆಸ್
ನವದೆಹಲಿ , ಸೋಮವಾರ, 24 ಅಕ್ಟೋಬರ್ 2016 (17:26 IST)
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಯಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮೋಹನ್ ಪ್ರಕಾಶ್ ಆರೋಪಿಸಿದ್ದಾರೆ.
 
ಹಣದುಬ್ಬರ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮೋದಿ ಸರಕಾರ ವಿಫಲವಾಗಿದೆ. ಆದ್ದರಿಂದ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಸೀಮಿತ ದಾಳಿಗೆ ಹೆಚ್ಚಿನ ಪ್ರಚಾರ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
 
ಕಳೆದ ಸೆಪ್ಟೆಂಬರ್ 28 ಮತ್ತು 29 ರಂದು ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮಿರದೊಳಗೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿ 30ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಕಿಸಾನ್ ಯಾತ್ರೆಗೆ ಭಾರಿ ಜನ ಬೆಂಬಲ ದೊರೆತಿರುವುದರಿಂದ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ವಿಶ್ವಾಸವಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮೋಹನ್ ಪ್ರಕಾಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ರೇಪ್ ಮಾಡಲು ಬಂದ ಮುಸ್ಲಿಂ ಯುವಕನ ಗುಪ್ತಾಂಗ ಕಚಕ್ ಎನಿಸಿದ ದಲಿತ ಯುವತಿ