Webdunia - Bharat's app for daily news and videos

Install App

ನೂತನ ಸಂಸತ್ ಭವನ ವೀಕ್ಷಿಸಿದ ನರೇಂದ್ರ ಮೋದಿ

Webdunia
ಶುಕ್ರವಾರ, 31 ಮಾರ್ಚ್ 2023 (10:39 IST)
ನವದೆಹಲಿ : ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು. ಒಂದು ಗಂಟೆಗೂ ಅಧಿಕ ಕಾಲ ಕಾಮಗಾರಿ ಪರಿಶೀಲನೆ ನಡೆಸಿದರು. ಹೊಸ ಲೋಕಸಭೆ ಮತ್ತು ರಾಜ್ಯಸಭೆ ಸದನದ ಒಳಾಂಗಣಕ್ಕೆ ತೆರಳಿ ವೀಕ್ಷಣೆ ನಡೆಸಿದರು. 
 
ಸೆಂಟ್ರಲ್ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

2020ರಲ್ಲಿ ಟಾಟಾ ಪ್ರಾಜೆಕ್ಟ್ಸ್ಗೆ ನೂತನ ಸಂಸತ್ ಭವನ ನಿರ್ಮಾಣದ ಹೊಣೆ ವಹಿಸಲಾಗಿತ್ತು. ಆ ಸಂದರ್ಭದಲ್ಲಿ 971 ಕೋಟಿ ವೆಚ್ಚಕ್ಕೆ ಅನುಮೋದನೆ ದೊರಕಿತ್ತು. ನಂತರ ಅದರ ಕಚ್ಚಾ ಸಾಮಾಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚ ಅಂದಾಜು 1,200 ಕೋಟಿಗೆ ಏರಿಸಲಾಗಿತ್ತು. 

ನೂತನ ಸಂಸತ್ ಭವನದಲ್ಲಿ ಹಲವು ಆಕರ್ಷಣೆಗಳಿವೆ. ಅದರಂತೆ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದೆ. ಈ ಲಾಂಛನದ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ. ಅದರ ತೂಕ ಸುಮಾರು 9,500 ಕೆ.ಜಿ ಇದ್ದು, 6.5 ಮೀಟರ್ ಎತ್ತರವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments