Select Your Language

Notifications

webdunia
webdunia
webdunia
webdunia

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

Prime Minister Narendra Modi

Sampriya

ನವದೆಹಲಿ , ಗುರುವಾರ, 4 ಡಿಸೆಂಬರ್ 2025 (19:34 IST)
Photo Credit X
ನವದೆಹಲಿ: ಭಾರತ ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಬಂದಿಳಿದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು ದೆಹಲಿಗೆ ಆಗಮಿಸಿದರು. 

ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ನರೇಂದ್ರ ಮೋದಿ ಅವರು ಕೈಹಿಡಿದು ಮಾತನಾಡುತ್ತಾ ಮುಂದೆ ಸಾಗಿದ್ದಾರೆ. 

ಈ ವೇಳೆ ಉಭಯ ದೇಶಗಳ ರಾಜತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು. 

ಪುಟಿನ್ ಅವರ ನಿಯೋಗದಲ್ಲಿ ರಷ್ಯಾ ಅಧಿಕಾರಿಗಳು ಸೇರಿದಂತೆ ರಕ್ಷಣಾ ಸಚಿವ ಆಂಡ್ರೆ ಬೆಲೊಸೊವ್‌ ಕೂಡ ಇದ್ದಾರೆ.ವಾರ್ಷಿಕ
ಶೃಂಗಸಭೆಗಾಗಿ ಅವರು ಎರಡು ದಿನ ಭಾರತಕ್ಕೆ ಭೇಟಿ ನೀಡಿದ್ದು, ಈ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತೆಯನ್ನು ಆಯೋಜಿಸಲಾಗಿದೆ. 

ಎಸ್‌– 400 ಕ್ಷಿಪಣಿ ವ್ಯವಸ್ಥೆಗಳ ಖರೀದಿ, ಸುಖೋಯ್‌–30 ಎಂಕೆಐ ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ರಷ್ಯಾದಿಂದ ಇತರ ಮಿಲಿಟರಿ ಸಾಧನಗಳನ್ನು ಖರೀದಿಸುವುದರಲ್ಲಿ ಭಾರತದ ಆಸಕ್ತಿ ಕುರಿತು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌