Publish Date: Thu, 14 Dec 2017 (14:16 IST)
Updated Date: Thu, 14 Dec 2017 (14:19 IST)
ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಹಮದಾಬಾದನ ರಾನಿಪ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದ್ದಾರೆ.
ರಾನಿಪ್‍ನಲ್ಲಿರುವ ನಿಶಾನ್ ಪ್ರೌಢಶಾಲೆಯಲ್ಲಿ ಸ್ಥಾಪನೆ ಮಾಡಿರುವ ಮತಗಟ್ಟೆ 115ರಲ್ಲಿ ನರೇಂದ್ರ ಮೋದಿ ಮತದಾನ ಮಾಡಿದ್ದಾರೆ. ನರೇಂದ್ರ ಮೋದಿ ಮತಗಟ್ಟೆಗೆ ಆಗಮಿಸುತ್ತಿದ್ದಂತೆಯೇ ನೆರೆದಿದ್ದ ಜನರು ಮೋದಿ ಹೆಸರಲ್ಲಿ ಘೋಷಣೆ ಕೂಗಿದ್ದಾರೆ. ನರೇಂದ್ರ ಮೋದಿ ಅವರು ಜನತೆಯತ್ತ ಕೈ ಬೀಸಿ ಮತಗಟ್ಟೆಗೆ ತೆರಳಿ ಮತಚಲಾವಣೆ ಮಾಡಿದರು.
ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (95) ಅವರು ಗಾಂಧಿನಗರದಲ್ಲಿ ಮತದಾನ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.