Publish Date: Fri, 17 Apr 2026 (14:02 IST)
Updated Date: Fri, 17 Apr 2026 (14:05 IST)
ಮಹಾರಾಷ್ಟ್ರ: ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ನಾಸಿಕ್ ಶಾಖೆಯ ಮಾನವ ಸಂಪನ್ಮೂಲ ಮುಖ್ಯಸ್ಥರು ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ದೂರು ನೀಡದಂತೆ ತಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಶಿಕ್ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ತನಗಾಗುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಾಗ ಕಂಪನಿಯ ಮಾನವ ಸಂಪನ್ಮೂಲ ಮುಖ್ಯಸ್ಥೆ ಮತ್ತು ಕಾರ್ಯಾಚರಣೆ ವ್ಯವಸ್ಥಾಪಕಿ ಅಶ್ವಿನಿ ಚೈನಾನಿ ಅವರು "ಇದೆಲ್ಲವೂ ನಡೆಯುತ್ತದೆ" ಎಂದು ಉದ್ಯೋಗಿಗೆ ಹೇಳಿ ಆರೋಪಿಗಳ ಪರವಾಗಿ ನಿಂತಿದ್ದಾರೆ ಎಂದು ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಟಿಸಿಎಸ್ ಕಂಪನಿಯ 7 ನೌಕರರನ್ನು ಬಂಧಿಸಿದ್ದಾರೆ. ಇನ್ನು ಸಂಸ್ಥೆಯ ಎಚ್ ಆರ್ ವಿಭಾಗದ ಸಿಬ್ಬಂದಿ ನಿಧಾ ಖಾನ್ ತಲೆ ಮರೆಸಿಕೊಂಡಿದ್ದಾಳೆ. ಈಕೆ ಗರ್ಭಿಣಿ ಎನ್ನುವ ಕಾರಣ ನೀಡಿರುವ ಕುಟುಂಬಸ್ಥರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ