Select Your Language

Notifications

webdunia
webdunia
webdunia
webdunia

ಬಿಜೆಪಿಗೆ ರಾಜೀನಾಮೆ ನೀಡಿದ ನವಜೋತ್ ಕೌರ್ ಸಿದ್ದು

ಬಿಜೆಪಿಗೆ ರಾಜೀನಾಮೆ ನೀಡಿದ ನವಜೋತ್ ಕೌರ್ ಸಿದ್ದು
ಚಂಡೀಗಡ್ , ಭಾನುವಾರ, 9 ಅಕ್ಟೋಬರ್ 2016 (11:52 IST)
ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಪತ್ನಿ ನವಜೋತ್ ಕೌರ್ ಸಿದ್ದು ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  
ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವರಾದ ವಿಜಯ್ ಸಂಪ್ಲಾ ನವಜೋತ್ ಕೌರ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನವಜೋತ್ ಸಿಂಗ್ ಸಿದ್ದು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಹಜವಾಗಿಯೇ ಅವರ ಪತ್ನಿ ನವಜೋತ್ ಕೌರ್ ಕೂಡಾ ರಾಜೀನಾಮೆ ನೀಡಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು. ಅದರಂತೆ, ಇಂದು ರಾಜೀನಾಮೆ ನೀಡಿದ್ದಾರೆ.
 
ನಿನ್ನೆ ನವಜೋತ್ ಕೌರ್ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸರಕಾರದಿಂದ ದ್ವೇಷದ ವಾತಾವರಣ ಸೃಷ್ಟಿ: ಯಚೂರಿ