ಪಂಜಾಬ್ ರಾಜ್ಯದಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ಆದೇಶ ನೀಡಿದ್ದರಿಂದ ಬೇಸತ್ತು ರಾಜ್ಯಸಭೆಗೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
52 ವರ್ಷ ವಯಸ್ಸಿನ ಮಾಜಿ ಕ್ರಿಕೆಟಿಗ ಸಿದ್ದು, ಮುಂದಿನ ತಿಂಗಳು ಆಪ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆ ಪ್ರಚಾರದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಾಗಲಿದ್ದಾರೆ ಎನ್ನಲಾಗಿದೆ.
ಪಂಜಾಬ್ ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಿಜೆಪಿ-ಸಾದ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಗಳಿವೆ.
ರಾಜ್ಯಸಭೆಗೆ ರಾಜೀನಾಮೆ ನೀಡಿದ ಸಿದ್ದು ನಿರ್ಧಾರವನ್ನು ಸ್ವಾಗತಿಸಿದ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಅವರೊಬ್ಬ ಉತ್ತಮ ವ್ಯಕ್ತಿ ಎಂದು ಬಣ್ಣಿಸಿದ್ದರು.
ಆದರೆ, ನವಜೋತ್ ಸಿಂಗ್ ಸಿದ್ದು ಇಲ್ಲಿಯವರೆಗೆ ಯಾವ ಪಕ್ಷವನ್ನು ಸೇರುತ್ತಾರೋ ಎನ್ನುವ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲವೆಂದು ಮೂಲಗಳು ತಿಳಿಸಿವೆ.
ಅವಕಾಶವಾದಿ ರಾಜಕಾರಣಿಯಾಗಿರುವ ಸಿದ್ದು, ಅವರಂತಹ ನಾಯಕರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಕಾಲಿ ನಾಯಕರು ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.