Webdunia - Bharat's app for daily news and videos

Install App

ಇಂದು ಸಿಧು ಕಾಂಗ್ರೆಸ್ ಸೇರುವ ಸಾಧ್ಯತೆ

Webdunia
ಬುಧವಾರ, 11 ಜನವರಿ 2017 (14:20 IST)
ಕ್ರಿಕೆಟರ್ ಪರಿವರ್ತಿತ ರಾಜಕಾರಣಿ, ಭಾರತೀಯ ಜನತಾ ಪಕ್ಷದ ಮಾಜಿ ನಾಯಕ ನವಜೋತ್ ಸಿಧು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ. 

ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದ ಸಿಧು ವಿದೇಶ ಪ್ರವಾಸದಲ್ಲಿರುವ ರಾಹುಲ್ ಮರಳಿ ಬರುವುದನ್ನೇ ಕಾಯುತ್ತಿದ್ದರು. ಹೊಸ ವರ್ಷದ ಮುನ್ನಾ ದಿನ ವಿದೇಶಕ್ಕೆ ಹಾರಿದ್ದ ರಾಹುಲ್ ನಿನ್ನೆ ಮುಂಜಾನೆ ವಾಪಸ್ಸಾಗಿದ್ದರು. ವಿಮಾನವನ್ನಿಳಿಯುತ್ತಿದ್ದಂತೆ ಹಿರಿಯ ನಾಯಕರ ಜತೆ ಸಭೆ ನಡೆಸಿದ ರಾಹುಲ್, ಪಂಜಾಬ್ ಚುನಾವಣೆಗೆ ಕಣಕ್ಕಿಳಿಯಲಿರುವ ಉಳಿದ 40 ಪಕ್ಷದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದರು. 117 ವಿಧಾನಸಭಾ ಕ್ಷೇತ್ರಗಳ ಪೈಕಿ ಕೈ ಈಗಾಗಲೇ 77 ಅಭ್ಯರ್ಥಿಗಳ ಹೆಸರುಳ್ಳ ಪ್ರಥಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
 
ಪಕ್ಷದ ವರಿಷ್ಠರ ಜತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಸಿಧು ಮತ್ತು ಅವರ ಪತ್ನಿ ಬಿಜೆಪಿಯನ್ನು ತ್ಯಜಿಸಿದ್ದರು.
 
2004 ಮತ್ತು 2014 ನಡುವೆ ಲೋಕಸಭೆಯಲ್ಲಿ ಅಮೃತಸರವನ್ನು ಪ್ರತಿನಿಧಿಸಿದ್ದ ಸಿಧು, ಬಿಜೆಪಿ ತಮ್ಮನ್ನು ಪಂಜಾಬ್‌ನಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದರು. ಜತೆಗೆ ತಮ್ಮನ್ನು 'ಅಲಂಕಾರಿಕ ಕೃತಿ'ಯನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
 
ಬಿಜೆಪಿ ತ್ಯಜಿಸಿದ ಬಳಿಕ ಕೇಜ್ರಿವಾಲ್ ನೇತೃತ್ವದ ಆಪ್ ಸೇರಲೆತ್ನಿಸಿದ್ದ ಅವರು, ಬಳಿಕ ‘ಆವಾಜ್ ಇ ಪಂಜಾಬ್’ ಪಕ್ಷವನ್ನು ಸ್ಥಾಪಿಸಿದ್ದರು. 
 
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸಿಧು ನೇತೃತ್ವದ ‘ಆವಾಜ್ ಇ ಪಂಜಾಬ್’ ಸ್ಪರ್ಧಿಸಬೇಕಿತ್ತು. ಆದರೆ, ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿದರೆ, ಆಡಳಿತ ವಿರೋಧಿ ಮತಗಳನ್ನು ವಿಭಜಿಸಿದಂತಾಗುತ್ತದೆ ಎಂಬ ಕಾರಣ ನೀಡಿರುವ ಸಿಧು, ಚುನಾವಣೆಯಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದರು. 
 
ಬಳಿಕ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತ ಪಡಿಸಿದ್ದ ಸಿಧು ಅವರ ಪತ್ನಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತೀಗ ಸಿಧು ಸಹ ಅಧಿಕೃತವಾಗಿ ಪಕ್ಷವನ್ನು ಸೇರಲಿದ್ದಾರೆ. 
 
ಸದ್ಯದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಿಧು ಅಮೃತಸರ್ ಪೂರ್ವದಿಂದ ಸ್ಪರ್ಧಿಸಲಿದ್ದಾರೆ ಎಂದು  ಹೇಳಲಾಗುತ್ತಿದೆ. 
 
ಪಂಜಾಬ್‌ನಲ್ಲಿ ಫೆಬ್ರವರಿ 4 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments