ರಾಯಪುರ: ನಾಗರಹಾವಿನಂತಿರುವ ನಕ್ಸಲಿಸಂ, ಅಭಿವೃದ್ಧಿಯ ಹಾದಿಯಲ್ಲಿ ಪದೇ ಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬಸ್ತಾರ್ ಒಲಿಂಪಿಕ್–2025 ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶಾಂತಿ ಮಾತ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
2026ರ ಮಾರ್ಚ್ 31ರೊಳಗೆ ದೇಶದಾದ್ಯಂತ ಕೆಂಪು ಭಯೋತ್ಪಾದನೆಯನ್ನು (ನಕ್ಸಲಿಸಂ) ಕೊನೆಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ಸಂಕಲ್ಪವಾಗಿದ್ದು, ಈ ಹಿನ್ನೆಲೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
ಈ ಗುರಿ ತಲುಪಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಶಸ್ತ್ರಾಸ್ತ್ರ ಹಿಡಿದವರಿಗೂ ಅಥವಾ ಭದ್ರತಾ ಸಿಬ್ಬಂದಿಗೂ ಯಾರಿಗೂ ಕೂಡ ಎಡಪಂಥೀಯ ಚಳುವಳಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದಿದ್ದಾರೆ.