ಬಿಹಾರ್ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಮತ ಎಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಈಗಾಗಲೇ ಎನ್ ಡಿಎ ಮುನ್ನಡೆ ಸಾಧಿಸಿದೆ.
ಈಗ ನಡೆಯುತ್ತಿರುವ ಮತ ಎಣಿಕೆಯಲ್ಲಿ ಎನ್ ಡಿಎ ಪಕ್ಷ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟ್ ಬಂಧನ್ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗೇ ಪಕ್ಷೇತರ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎಲ್ ಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎನ್ನಲಾಗಿದೆ.
243 ಕ್ಷೇತ್ರಗಳಲ್ಲಿ 122 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವವರು ಬಿಹಾರದ ಗದ್ದುಗೆ ಏರಲಿದ್ದಾರೆ ಎನ್ನಲಾಗಿದೆ. ಲೀಡ್ ನಲ್ಲಿ ಈಗಾಗಲೇ ಎನ್ ಡಿಎ ಮ್ಯಾಜಿಕ್ ನಂಬರ್ ದಾಟಿದ್ದು, ಮತ್ತೆ ನಿತೀಶ್ ಕುಮಾರ್ ಬಿಹಾರದ ಚುಕ್ಕಾಣಿ ಹಿಡಿಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.