ಕೇರಳದಲ್ಲಿ ಪ್ರಾಣಿ ಬಳಿ: ಡಿಕೆಶಿ ಆರೋಪವನ್ನು ತಳ್ಳಿಹಾಕಿದ ಕೇರಳದ ಸಚಿವೆ ಬಿಂದು

sampriya
ಶುಕ್ರವಾರ, 31 ಮೇ 2024 (18:02 IST)
Photo By X
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಕೇರಳದಲ್ಲಿ ನಡೆದಿದೆ ಎನ್ನಲಾದ ಪ್ರಾಣಿ ಬಲಿ ಆರೋಪವನ್ನು ಕೇರಳದ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವೆ ಆರ್. ಬಿಂದು ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ವಿರುದ್ಧ ಉತ್ತರ ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ನೀಡುವ 'ಶತ್ರು ಭೈರವಿ ಯಾಗ' ಕೈಗೊಳ್ಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಗುರುವಾರ ಆರೋಪಿಸಿದ್ದರು. ಅದರ ಬೆನ್ನಲ್ಲೇ ಕೇರಳದ ಸಚಿವೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂತಹ ಕೃತ್ಯಗಳು ಕೇರಳದಲ್ಲಿ ನಡೆಯುವುದಿಲ್ಲ. ದೇಶದ ಇತರೆ ಭಾಗಗಳಲ್ಲಿ ಸಮಾಜವನ್ನು ಕರಾಳ ಯುಗಕ್ಕೆ ಎಳೆಯುವ ಪ್ರಯತ್ನಗಳು ನಡೆಯುತ್ತಿವೆ. ಹಾಗಿದ್ದರೂ, ಅಂಥ ಪ್ರಯತ್ನಗಳು ಕೇರಳದಲ್ಲಿ ನಡೆದಿವೆಯೇ ಎಂಬುದರ ಕುರಿತು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.

ಯಾರ ಹೆಸರನ್ನು ಬಹಿರಂಗಪಡಿಸದೇ ರಾಜ್ಯದ ಕೆಲವು ರಾಜಕೀಯ ವ್ಯಕ್ತಿಗಳು ಈ ಕೃತ್ಯ ನಡೆಸಿದ್ದರು ಎಂದಿದ್ದರು. ಅಘೋರಿಗಳ ಮೂಲಕ ಈ ಯಾಗ ನಡೆಸಲಾಗಿದೆ ಎಂದೂ ಶಿವಕುಮಾರ್‌ ಆರೋಪ ಮಾಡಿದ್ದರು.

ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಬಳಿ ಶತ್ರು ಸಂಹಾರಕ್ಕಾಗಿ 'ಶತ್ರು ಭೈರವಿ ಯಾಗ' ನಡೀತಿದೆ. ಈ ಯಾಗಕ್ಕೆ 'ಪಂಚ ಬಲಿ' ನೀಡಲಾಗುತ್ತದೆ. 21 ಮೇಕೆ, ಮೂರು ಎಮ್ಮೆ, 21 ಕಪ್ಪು ಕುರಿ, ಐದು ಹಂದಿಗಳ ಬಲಿ ಕೊಡಲಾಗುತ್ತದೆ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ಅವರು ಹೇಳಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments