ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!

ಅತಿಥಾ
ಗುರುವಾರ, 22 ಫೆಬ್ರವರಿ 2018 (17:52 IST)
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್‌ ಮೋದಿ–ಮೆಹುಲ್‌ ಚೋಕ್ಸಿ ಒಡೆತನಕ್ಕೆ ಸೇರಿದ ಒಂಬತ್ತು ಐಷಾರಾಮಿ ಕಾರುಗಳನ್ನು ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಧಿಕಾರಿಗಳು ಜಪ್ತಿ ಮಾಡಿರುವ ಕಾರುಗಳ ಪೈಕಿ ರೋಲ್ಸ್ ರಾಯ್ಸ್ ಘೋಸ್ಚ್, ಫಾರ್ಷ್ ಪನಮೆರಾ, 2 ಮರ್ಸಿಡೀಸ್ ಬೆಂಜ್ ಜಿಎಲ್ 350 ಸಿಡಿಐ, ಮೂರು ಹೋಂಡಾ ಕಾರುಗಳು, ಟೋಯೋಟಾ ಫಾರ್ಚುನರ್ ಮತ್ತು ಟೋಯೊಟಾ ಇನ್ನೋವಾ ಕಾರುಗಳನ್ನು ಆಧಿಕಾರಿಗಳು ಜಪ್ತಿ ಮಾಡಿದ್ದಾರೆ.
 
ಮುಂಬೈ ಬಳಿಯ ಅಲಿಬಾಗ್‌ನಲ್ಲಿರುವ ನೀರವ್‌ ಮೋದಿಯ ₹32 ಕೋಟಿ ವೆಚ್ಚದ ಐಷಾರಾಮಿ ತೋಟದ ಮನೆಯನ್ನು ಸಿಬಿಐ ಅಧಿಕಾರಿಗಳು ಬುಧವಾರ ಬೀಗ ಜಡಿದಿದ್ದರು. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ಜಾರಿ ನಿರ್ದೇಶನಾಲಯ ಗಿಲಿ ಇಂಡಿಯಾ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಅನಿಯತ್ ಶಿವರಾಮನ್ ಅವರ ನಿವಾಸವನ್ನು ಸಹ ಜಪ್ತಿ ಮಾಡಿದ್ದಾರೆ.
 
ಇದಲ್ಲದೆ ನೀರವ್ ಮೋದಿಗೆ ಸೇರಿದ ಸುಮಾರು 7.80 ಕೋಟಿ ಮೌಲ್ಯದ ಮ್ಯೂಚುವಲ್ ಫಂಡ್ಸ್ ಮತ್ತು ಷೇರುಗಳು, ಮೆಹುಲ್ ಚೋಕ್ಸಿಯ ಸುಮಾರು 86.72 ಕೋಟಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments