Select Your Language

Notifications

webdunia
webdunia
webdunia
webdunia

ನೀಟ್ ಪರೀಕ್ಷೆ ಬರೆದಿದ್ದವರಿಗೆ ಶಾಕ್: ಮೇ 3 ರಂದು ನಡೆದಿದ್ದ ಪರೀಕ್ಷೆ ರದ್ದು

Students
ನವದೆಹಲಿ: ವೈದ್ಯಕೀಯ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ನೀಡಲು ಈ ವರ್ಷ ನಡೆದ ನೀಟ್ ಪರೀಕ್ಷೆ ರದ್ದುಗೊಳಿಸಲಾಗಿದೆ. ಮೇ 3 ರಂದು ನಡೆದಿದ್ದ ಪರೀಕ್ಷೆ ಅಕ್ರಮ ಹಿನ್ನಲೆಯಲ್ಲಿ ರದ್ದಾಗಿದೆ.

ಈ ಸಾಲಿನ ನೀಟ್ ಪರೀಕ್ಷೆ ಮೇ 3 ರಂದು ನಡೆದಿತ್ತು. ಆದರೆ ರಾಜಸ್ತಾನದ ಸೀಕರ್ ನಲ್ಲಿ 140 ಪ್ರಶ್ನೆಗಳು ಸೋರಿಕೆಯಾಗಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಪರೀಕ್ಷಾ ಅಕ್ರಮದ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಮೇ 3 ರಂದು ನಡೆದಿದ್ದ ಪರೀಕ್ಷೆ ರದ್ದುಗೊಳಿಸಲಾಗಿದೆ.

ಪರೀಕ್ಷೆ ಅಕ್ರಮ ನಡೆದಿರುವುದು ತಿಳಿದುಬಂದ ಮೇಲೂ ರದ್ದುಗೊಳಿಸದೇ ಇದ್ದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಇದನ್ನು ತಪ್ಪಿಸಲು ಕೇಂದ್ರ ಪರೀಕ್ಷಾ ಪ್ರಾಧಿಕಾರ ಈಗಾಗಲೇ ನಡೆದಿರುವ ಪರೀಕ್ಷೆಯನ್ನೇ ರದ್ದುಗೊಳಿಸಿದೆ.

ಅಷ್ಟೇ ಅಲ್ಲದೆ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಿದೆ. ಪರೀಕ್ಷೆಗೂ ಮೊದಲೇ ಗೆಸ್ ಪೇಪರ್ ಹರಿದಾಡಿದ್ದು ಹೇಗೆ, ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ವಿವರವಾದ ತನಿಖೆ ನಡೆಯಲಿದೆ. ಇನ್ನು ಪರೀಕ್ಷೆ ರದ್ದಾಗಿರುವುದರಿಂದ ವಿದ್ಯಾರ್ಥಿಗಳು ಆತಂಕಗೊಳ್ಳುವುದು ಬೇಡ. ಪರೀಕ್ಷೆ ನಡೆಯುವ ಹೊಸ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ