NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

Krishnaveni K
ಶನಿವಾರ, 14 ಜೂನ್ 2025 (16:08 IST)
ಬೆಂಗಳೂರು: ಈ ಸಾಲಿನ ನೀಟ್ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶವನ್ನು ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ವೀಕ್ಷಣೆ ಮಾಡಬಹುದು. ಎಲ್ಲಿ ವೀಕ್ಷಣೆ ಮಾಡಬೇಕು ಎಂಬ ವಿವರ ಇಲ್ಲಿದೆ ನೋಡಿ.

ವೈದ್ಯಕೀಯ ಕೋರ್ಸ್ ಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ವರ್ಷ ಪರೀಕ್ಷೆಯಲ್ಲಿ ರಾಜಸ್ಥಾನದ ಮಹೇಶ್ ಕುಮಾರ್ ಅಗ್ರಸ್ಥಾನ ಪಡೆದರೆ ಮಧ್ಯಪ್ರದೇಶದ ಉತ್ಕರ್ಷ್ ಎರಡನೇ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರದ ಕೃಶಾಂಗ್ ಜೋಶಿ ಮೂರು ಮತ್ತು ದೆಹಲಿಯ ಮೃಣಾಲ್ ಕಿಶೋರ್ ಝಾ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದಿಂದ ನಿಖಿಲ್ ಸೋನದ್ 17 ನೇ ರಾಂಕ್ ಪಡೆದು ಮೊದಲಿಗರಿದ್ದಾರೆ. ಉಳಿದಂತೆ ರುಚಿರ್ ಗುಪ್ತಾ 22 ನೇ ರಾಂಕ್, ತೇಜಸ್ ಸೈಲೇಶ್ 38 ನೇ ರಾಂಕ್, ಪಿ ಜಾಗಿರ್ದಾರ್42 ನೇ ರಾಂಕ್, ಹರಿಣಿ ಶರ್ಮಾ 72 ನೇ ರಾಂಕ್, ದಿಗಂತ್ 80 ನೇ ರಾಂಕ್, ನಿಧಿ 84 ನೇ ರಾಂಕ್ ಪಡೆದಿದ್ದಾರೆ.

ಫಲಿತಾಂಶ ವೀಕ್ಷಿಸುವುದು ಹೇಗೆ?
Neet.nta.nic.in ವೆಬ್ ಸೈಟ್ ಗೆ ಲಾಗಿನ್ ಆಗಿ. ಈಗ ಮುಖಪುಟದಲ್ಲಿ ನೀಟ್ ಯುಜಿ 2025 ಫಲಿತಾಂಶ ಲಿಂಕ್ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿ ಲಾಗಿನ್ ಮಾಡಲು ನಿಮ್ಮ ದಾಖಲೆಗಳನ್ನು ನಮೂದಿಸಿ. ಈಗ ಫಲಿತಾಂಶ ಸ್ಕ್ರೀನ್ ಮೇಲೆ ಬರುತ್ತದೆ. ಇದನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments