ನವದೆಹಲಿ: ಅನಾರೋಗ್ಯಕ್ಕೀಡಾದ ತಾಯಿಗೆ ಔಷಧ ತರಲು ಸಹಾಯ ಮಾಡುವಂತೆ ಕೇಳಿಕೊಂಡು ಬಂದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯಾತನೇ ಅತ್ಯಾಚಾರವೆಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಬಾಲಕಿಯ ತಂದೆ ಊರಿನಲ್ಲಿರಲಿಲ್ಲ. ಈ ವೇಳೆ ತಾಯಿಗೆ ಅನಾರೋಗ್ಯವಾಗಿತ್ತು. ಹೀಗಾಗಿ ಔಷಧಿ ತರಲು ನೆರೆಮನೆಯವನ ಸಹಾಯ ಕೇಳಿದ್ದಳು. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ.
ಇದೀಗ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.