Select Your Language

Notifications

webdunia
webdunia
webdunia
webdunia

ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನ: ಬ್ಯಾನರ್ಜಿ

ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನ: ಬ್ಯಾನರ್ಜಿ
ಕೋಲ್ಕತ್ತಾ , ಭಾನುವಾರ, 23 ಜನವರಿ 2022 (14:01 IST)
ಕೋಲ್ಕತ್ತಾ : ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಈ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದ್ದೇ ಆದರೆ, ಇಡೀ ದೇಶವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು, ದೇಶ ನಾಯಕ್ ದಿವಸ್ ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ನೇತಾಜಿಯವರು ದೇಶಭಕ್ತಿ, ಧೈರ್ಯ, ನಾಯಕತ್ವ, ಏಕತೆ ಮತ್ತು ಭ್ರಾತೃತ್ವದ ದ್ಯೋತಕರಾಗಿದ್ದಾರೆ. ಮುಂದಿನ ಪೀಳಿಗೆಗೆ ನೇತಾಜಿ ಸ್ಫೂರ್ತಿಯಾಗಿದ್ದು, ಇದು ಹೀಗೆಯೇ ಮುಂದುವರಿಯುತ್ತದೆ.

ದೇಶನಾಯಕ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದಂದು ಅವರಿಗೆ ಗೌರವಾರ್ಪಣೆ. ರಾಷ್ಟ್ರೀಯ ಮತ್ತು ಜಾಗತಿಕ ಐಕಾನ್, ಬಂಗಾಳದಿಂದ ನೇತಾಜಿಯವರ ಉದಯವು ಭಾರತೀಯ ಇತಿಹಾಸದಲ್ಲಿ ಸಾಟಿಯಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

.


Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಮುಗಿಸಿ ಬರುತ್ತಿದ್ದ ಯುವತಿ ಮೇಲೆ ಅತ್ಯಾಚಾರ!