Daily Horoscope
✕

ಹೊಸ ಸಂಘರ್ಷ : ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ

Webdunia
ಶುಕ್ರವಾರ, 28 ಜುಲೈ 2023 (11:02 IST)
ಇಂಫಾಲ : ಜನಾಂಗೀಯ ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ನಲ್ಲಿ ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಗ್ರಾಮಸ್ಥರ ಪ್ರಕಾರ ಬುಧವಾರ ರಾತ್ರಿಯಿಂದ ಗುಂಡಿನ ಸದ್ದು ಕೇಳಿ ಬರುತ್ತಿದೆ.

ಹಿಂಸಾಚಾರದ ಸಂದರ್ಭದಲ್ಲಿ ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಗುಂಡಿನ ಚಕಮಕಿ ನಡೆದ ಸ್ಥಳದ ಸಮೀಪದಲ್ಲಿ ವಾಸಿಸುತ್ತಿದ್ದ ಅನೇಕ ಗ್ರಾಮಸ್ಥರು ಬೇರೆಡೆ ಆಶ್ರಯ ಪಡೆಯುತ್ತಿದ್ದಾರೆ. ನಿರಂತರ ಗುಂಡಿನ ಕಾಳಗದಿಂದ ಗ್ರಾಮಸ್ಥರೆಲ್ಲ ಭಯಗೊಂಡಿದ್ದಾರೆ ಎಂದು ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದಕ್ಕೂ ಮುನ್ನ ಬುಧವಾರ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್ಗಳಿಗೆ ಗುಂಪೊಂದು ಬೆಂಕಿ ಹಚ್ಚಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳವಾರ ಸಂಜೆ ದಿಮಾಪುರದಿಂದ ಬಸ್ಗಳು ಬರುತ್ತಿದ್ದಾಗ ಸಪೋರ್ಮಿನಾದಲ್ಲಿ ಈ ಘಟನೆ ಸಂಭವಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

ಮುಂದಿನ ಸುದ್ದಿ
Show comments